ಸಮಗ್ರ ನ್ಯೂಸ್: ಖಾಸಗಿ ಬಸ್-ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದಿದ್ದು ಮೂವರ ಸ್ಥಿತಿ ಗಂಭೀರ, ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಕಲಬುರ್ಗಿಯ ಹುಮನಾಬಾದ್ ರಿಂಗ್ ರಸ್ತೆಯ ಹೊರವಲಯದಲ್ಲಿ ಖಾಸಗಿ ಬಸ್ ಹಾಗೂ ಸಿಮೆಂಟ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡೂ ವಾಹನಗಳು ಪಲ್ಟಿಯಾದ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿ ತಲುಪಿದ್ದಾರೆ. ಅಲ್ಲದೇ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ.
ಇನ್ನೂ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹುಮನಾಬಾದ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.