Ad Widget .

ಬಸ್ ನಡಿಗೆ ಬಿದ್ದ ಬೈಕ್| ಯುವತಿ ದಾರುಣ ಸಾವು

ಸಮಗ್ರ ನ್ಯೂಸ್: ಅಣ್ಣ-ತಂಗಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಬಸ್ ತಾಗಿದ್ದರಿಂದ ಕೆಳಗೆ ಬಿದ್ದ ತಂಗಿ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಲಕ್ಷ್ಮಿದೇವಿ (50) ಮೃತಪಟ್ಟ ದುರ್ದೈವಿ. ಅಣ್ಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget . Ad Widget . Ad Widget . Ad Widget .

ಚಿಂತಾಮಣಿ ಮೂಲದ ಲಕ್ಷ್ಮಿದೇವಿ ಅವರು ಬೆಂಗಳೂರಿನ ಕೋಡಿಪಾಳ್ಯದಲ್ಲಿ ನೆಲೆಸಿರುವ ಅಣ್ಣನ ಮನೆಗೆ ಬಂದಿದ್ದರು. ಇಂದು ಬೆಳಗ್ಗೆ 8.30ರ ಸುಮಾರಿನಲ್ಲಿ ಅಣ್ಣನ ಜತೆ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಪ್ಯಾಲೆಸ್ ರಸ್ತೆಯ ಗೇಟ್ ನಂ.8ರ ಬಳಿ ಪುಟ್ಟಪರ್ತಿಯಿಂದ ಬೆಂಗಳೂರು ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಕೆಎಸ್‍ಆರ್ ಟಿಸಿ ಬಸ್ ಇವರ ವಾಹನಕ್ಕೆ ತಾಗಿದೆ.

Ad Widget . Ad Widget .

ಆ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಅಣ್ಣ-ತಂಗಿ ಇಬ್ಬರೂ ಒಂದೊಂದು ಕಡೆ ಬಿದ್ದಿದ್ದು, ತಂಗಿ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ದ್ದಾರೆ. ಕೆಎಸ್‍ಆರ್‍ಟಿಸಿ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *