Ad Widget .

ಡಿ ಕೆ ಶಿವಕುಮಾರ್ ಗೆ ನಿಂದಿಸಿದ ಸಾಯಿಗಿರಿಧರ್ ಗೆ ಜೈಲುಶಿಕ್ಷೆ ವಿಧಿಸಿದ ಸುಳ್ಯ ಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ನಲ್ಲಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆತ್ತಿಕೊಂಡಿದ್ದರು. ಈ ವೇಳೆ ಸುಳ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಹೇಳುವುದರ ಜತೆಗೆ ಸಚಿವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಡಿಕೆಶಿ ಪರವಾಗಿ ಮೆಸ್ಕಾಂ ಹಿರಿಯ ಅಧಿಕಾರಿಗಳು ಗಿರಿಧರ ರೈಯವರ ಮೇಲೆ ದೂರು ನೀಡಿದ್ದರು.

Ad Widget . Ad Widget . Ad Widget .

ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋ ರಾತ್ರಿ ಗಿರಿಧರ್ ರೈಯವರ ಮನೆಗೆ ತೆರಳಿದ್ದರು. ಮನೆ ಬಾಗಿಲು ತೆರೆಯದಿದ್ದಾಗ ಹಂಚು ಸರಿಸಿ ಒಳ ಪ್ರವೇಶಿಸಿ ಗಿರಿಧರ್ ರೈಯವರನ್ನು ಬಂಧಿಸಲಾಗಿತ್ತು. ಈ ಪ್ರಕರಣ ರಾಜ್ಯಾದಾದ್ಯಂತ ಸುದ್ದಿಯಾಗಿತ್ತು.

ಘಟನೆಯ ಕುರಿತಂತೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು. ಸುಳ್ಯ ನ್ಯಾಯಾಲಯದಲ್ಲಿ ಈ ಕುರಿತಂತೆ ವಿಚಾರಣೆ ನಡೆಯುತ್ತಿತ್ತು. ಸಾಕ್ಷಿಗಳ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನೂ ಸಾಕ್ಷಿಯನ್ನಾಗಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು.

ನಂತರ ಡಿಕೆ ಶಿವಕುಮಾರ್ ಸುಳ್ಯಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿದಿದ್ದರು. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು ಇಂದು ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ಎ. ರವರು ತೀರ್ಪು ಪ್ರಕಟಿಸಿದರು.

ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದ್ದು, 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ ಎಪಿಪಿ ಜನಾರ್ಧನ ಬಿ. ವಾದಿಸಿದ್ದರು.

Leave a Comment

Your email address will not be published. Required fields are marked *