ಸಮಗ್ರ ನ್ಯೂಸ್: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಈ ಮಳೆ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ದುರ್ಬಲಗೊಂಡಿದ್ದು, ತೆಲಂಗಾಣ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ತೀವ್ರಗೊಳ್ಳುವ ಸಾಧ್ಯತೆ ಇದೆ. ಇದರಿಂದ ದಕ್ಷಿಣದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.