Ad Widget .

ವಿಜಯಪುರ: ಕುರಿಕಾಯುತ್ತಿದ್ದ ಸಹೋದರರು ಸಿಡಿಲಿಗೆ ಬಲಿ

ಸಮಗ್ರ ನ್ಯೂಸ್::ಕುರಿ ಕಾಯುತ್ತಿದ್ದ ಸಹೋದರರಿಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ದಲ್ಲಿ ನಡೆದಿದೆ. ತಾಲೂಕಿನಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಜೊತೆಗೆ ಸಿಡಿಲಿನ ಅಬ್ಬರಕ್ಕೆ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿ ನಿಲ್ಲಿಸಿಕೊಂಡಿದ್ದ ಕುರಿಗಾಯಿ ಸಹೋದರರಿಬ್ಬರು ಸಿಡಿಲಿನ ಹೊಡೆತಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

Ad Widget . Ad Widget .

ಬೀರಪ್ಪ ಶಿವಪ್ಪ ಬಡೆಗೋಳ (20), ಮಹೇಶ ಸತ್ಯಪ್ಪ ಬಡೆಗೋಳ‌(14) ಸಾವನ್ನಪ್ಪಿದ್ದಾರೆ. ಸಹೋದರರ ಜೊತೆಗೆ ಇದ್ದ 9 ಕುರಿಗಳು ಸಹ ಸಿಡಿಲ ಬಡಿತಕ್ಕೆ ಸಾವನ್ನಪ್ಪಿವೆ.

Ad Widget . Ad Widget .

ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದವರು. ಬದುಕು ಕಟ್ಟಿಕೊಳ್ಳಲು ಕುರಿಗಳ ಸಮೇತ ವಿಜಯಪುರ ಜಿಲ್ಲೆಗೆ ಬಂದಿದ್ದರು.
ಆದರೆ ವಿಧಿಯಾಟಕ್ಕೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *