Ad Widget .

ಉಪ್ಪಿನಂಗಡಿ: ಬುಡೋಳಿ ಸಮೀಪ ಸರಣಿ ಅಪಘಾತ

ಸಮಗ್ರ ನ್ಯೂಸ್: ಮಂಗಳೂರು- ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ.

Ad Widget . Ad Widget .

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ಹೋಗಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ.

Ad Widget . Ad Widget .

6 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಿಂದ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ. ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು.‌ಬಳಿಕ ಸಾರ್ವಜನಿಕರು ಸುಗಮ ಸಂಚಾರಕ್ಕೆ ಮಾಡಲು ಕಾರ್ಯಾಚರಣೆ ನಡೆಸಿದರು. ಬೆಳಿಗ್ಗೆ 9.30ರ ವೇಳೆಗೆ ಸುಗಮ ಸಂಚಾರ ಸಾಧ್ಯವಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *