ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ; ಕಾರಣ?

ಸಮಗ್ರ ನ್ಯೂಸ್: ಕಳೆದ ವಾರ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಅದೇ ಲಾಡ್ಜ್ ನಲ್ಲಿ ಮತ್ತೊಂದು ಆತ್ಮಹತ್ಯೆ ನಡೆದಿದೆ.

Ad Widget ... ..

ಮಂಗಳೂರು ಮೂಲದ ಮೆಡಿಕಲ್ ರೆಪ್ ಶರಣ್ ರಾಜ್(33) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ.

Ad Widget

ಸಂತೋಷ್ ಆತ್ಮಹತ್ಯೆ ಬಳಿಕ ಲಾಡ್ಜ್ ಹೆಸರು ಬದಲಿಸಿದ್ದರು. ಆದರೆ ಇದೀಗ ಮತ್ತೊಬ್ಬ ವ್ಯಕ್ತಿ ಲಾಡ್ಜ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಖಾಸಗಿ ಹೋಟೆಲ್​ನಲ್ಲೇ ಮತ್ತೊಂದು ಆತ್ಮಹತ್ಯೆ ಆಗಿರುವುದು ಅನೇಕ ಶಂಕೆಗಳಿಗೆ ಕಾರಣವಾಗಿದೆ. ಎರಡು ದಿನದ ಹಿಂದಷ್ಟೇ ಈ ಲಾಡ್ಜ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿ ಹೆಸರು ಬದಲಾಯಿಸಲಾಗಿತ್ತು. ಆದರೆ ಈಗ ಮತ್ತೆ ಅಲ್ಲೇ ಅನಾಹುತ ನಡೆದಿದೆ. ಈ ರೀತಿ ಖಾಸಗಿ ಲಾಡ್ಜ್ ಸೂಸೈಡ್ ಸ್ಪಾಟ್ ಆದಂತಿದೆ.

Leave a Comment

Your email address will not be published. Required fields are marked *