ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು – ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

Ad Widget ... ..

ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿ ಮಾದ್ಯಮದವರೊಂದಿಗೆ ಮಾತನಾಡಿದರು. ಡಿಸೆಂಬರ್ ತಿಂಗಳಲ್ಲಿ ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿದೆ, ಇದಕ್ಕಾಗಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೆವೆ. ಕೇಂದ್ರ ವಿಮಾನಯಾನ ಸಚಿವರಿಗೆ ಈ ಕುರಿತು ಪ್ರಸ್ತಾವನೆ ಕಳುಹಿಸಿ ಅಲ್ಲಿಂದ ಅನುಮೋದನೆ ಪಡೆದ ಕೂಡಲೇ ವಿಮಾನ ನಿಲ್ದಾಣಕ್ಕೆ ನಾಮಕರಣದ ಆದೇಶವನ್ನು ಪಡೆದುಕೊಳ್ಳುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Ad Widget

Leave a Comment

Your email address will not be published. Required fields are marked *