ಸುಳ್ಯ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಿ.ಜಿ ಮುಡೂರು(95) ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Ad Widget ... ..

ನಾಡಿನ ಅಗ್ರಮಾನ್ಯ ಸಾಹಿತಿಯಾಗಿದ್ದ ಮುಡೂರುರವರು ತಮ್ಮ ಇಳಿವಯಸ್ಸಿನಲ್ಲೂ ಅತ್ಯಂತ ಲವಲವಿಕೆಯಿಂದ ಇದ್ದರು. ಅಧ್ಯಾಪಕರಾಗಿ, ಸಾಹಿತಿಯಾಗಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಮುಡೂರುರವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅರೆಭಾಷೆ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಕಾಡಮಲ್ಲಿಗೆ, ಹೊಸತು ಕಟ್ಟು, ಅಬ್ಬಿಯ ಮಡಿಲು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಟಿ.ಜಿ ಮುಡೂರುರವರ ನಿಧನಕ್ಕೆ ಸಾಹಿತ್ಯ ಕ್ಷೇತ್ರ ಕಂಬನಿ ಮಿಡಿದಿದೆ.

Ad Widget

Leave a Comment

Your email address will not be published. Required fields are marked *