Ad Widget .

ಎ.23 ಮಂಗಳೂರು ವಿವಿ ಘಟಿಕೋತ್ಸವ| ಕರಾವಳಿಯ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು ಮತ್ತು ತುಳು ರಂಗಭೂಮಿ ಕಲಾವಿದ, ನಿರ್ದೇಶಕ ದೇವದಾಸ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ಪ್ರಕಟಿಸಿದೆ.

Ad Widget . Ad Widget .

ಎ.23ರ ಶನಿವಾರ ಜರುಗುವ ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಮತ್ತು ಕುಲಾಧಿಪತಿಗಳಾದ ತಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.

Ad Widget . Ad Widget .

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವಥ್ ನಾರಾಯಣ ಘಟಿಕೋತ್ಸವದಲ್ಲಿ ಉಪಸ್ಥಿತರಿರುತ್ತಾರೆ. ರಾಜ್ಯಪಾಲರು ಅಧ್ಯಕೀಯ ಭಾಷಣ ಮಾಡಲಿದ್ದಾರೆ.

Leave a Comment

Your email address will not be published. Required fields are marked *