ಸಮಗ್ರ ನ್ಯೂಸ್: ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಿಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ .
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯ ಸರ್ಕಾರ ಪಠ್ಯಕ್ರಮದಲ್ಲಿ ರಾಮಾಯಣ , ಭಗವದ್ಗೀತೆ ಅಳವಡಿಸುವುದಾಗಿ ಯಾವತ್ತೂ ಹೇಳಿಲ್ಲ . ಮನುಷ್ಯನ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಾಗಿರುವ ಶಿಕ್ಷಣವನ್ನು ಕಲಿಸುವಲ್ಲಿ ಗಮನ ಹರಿಸಲಾಗಿದೆ.ಕೆಲ ನೈತಿಕ ಅಂಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡಲಾಗುವುದು. ಜೊತೆಗೆ ಜೀವನಕ್ಕೆ ಬೇಕಾದ ಶಿಕ್ಷಣವನ್ನು ನಾವು ಹೇಳಿಕೊಡುತ್ತೇವೆಯೇ ಹೊರತು, ಧಾರ್ಮಿಕವಾಗಿ ಪೂಜೆಯನ್ನು ಯಾವ ರೀತಿ ಮಾಡುತ್ತೇವೆ ಎಂದು ಹೇಳಿಕೊಡುವುದಿಲ್ಲ ಎಂದು ಹೇಳಿದರು.