Ad Widget .

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಕರಾವಳಿಯ ಉಭಯ ಜಿಲ್ಲೆಗಳಲ್ಲಿ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಎ. 22ರಿಂದ ಮೇ 18ರವರೆಗೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 12 ಸರಕಾರಿ, 23 ಅನುದಾನಿತ ಮತ್ತು 16 ಅನುದಾನ ರಹಿತ ಕಾಲೇಜುಗಳ ಸಹಿತ ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅವುಗಳಿಗೆ 14 ಮಂದಿ ರೂಟ್‌ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ.

Ad Widget . Ad Widget .

15,652 ಬಾಲಕರು ಹಾಗೂ 15,656 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಕಲಾ ವಿಭಾಗದಲ್ಲಿ 4,329, ವಾಣಿಜ್ಯ ವಿಭಾಗದಲ್ಲಿ 14,987 ಹಾಗೂ ವಿಜ್ಞಾನ ವಿಭಾಗದಲ್ಲಿ 11,992 ವಿದ್ಯಾರ್ಥಿಗಳಿದ್ದಾರೆ.

ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

14,597 ಹೊಸ, 326 ಖಾಸಗಿ ಮತ್ತು 349 ಪುನರಾವರ್ತಿತ ಅಭ್ಯರ್ಥಿಗಳು ಸೇರಿ 15,272 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ವಿಜ್ಞಾನ ವಿಭಾಗದ 2,203 ಹುಡುಗರು, 2,589 ಹುಡುಗಿಯರು, ವಾಣಿಜ್ಯ ವಿಭಾಗದ 3,935 ಹುಡುಗರು, 3,915 ಹುಡುಗಿಯರು, ಕಲಾ ವಿಭಾಗದ 796 ಹುಡುಗರು, 728 ಹುಡುಗಿಯರು ಪರೀಕ್ಷೆ ಬರೆಯಲಿದ್ದಾರೆ. ಒಟ್ಟಾರೆಯಾಗಿ ವಿಜ್ಞಾನ ವಿಭಾಗದ 4,792, ವಾಣಿಜ್ಯ ವಿಭಾಗದ 7,850 ಹಾಗೂ ಕಲಾ ವಿಭಾಗದ 1,524 ವಿದ್ಯಾರ್ಥಿಗಳು ಇದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಸುರಕ್ಷತಾ ಮಾರ್ಗಸೂಚಿಗಳನ್ನು ಅಳವಡಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಿಸುವ ತಂಡ, ಪರೀಕ್ಷ ಕೇಂದ್ರಕ್ಕೆ ವೀಕ್ಷಕರ ನೇಮಕ, ಪ್ರಶ್ನೆಪತ್ರಿಕೆ ಪಾಲಕರ ತಂಡ, ಜಿಲ್ಲೆಯ ಮಾರ್ಗಾಧಿಕಾರಿಗಳ ತಂಡ, ಪರೀಕ್ಷೆಯ ಪರಿವೀಕ್ಷಣೆಗೆ ಸಂಚಾರಿ ಜಾಗೃತ ದಳದ ನಿಯೋಜನೆ ಮಾಡಲಾಗಿದೆ.

ನಿಷೇಧಾಜ್ಞೆ ಜಾರಿ

ಉಭಯ ಜಿಲ್ಲೆಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಿಜಾಬ್ ವಿವಾದದಿಂದಾಗಿ ಜಿಲ್ಲೆಗಳಲ್ಲಿ ಕೋಮು ಸಾಮರಸ್ಯ ಕಲಹ ಉಂಟಾಗಿದ್ದು, ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನಿಷೇದಾಜ್ಞೆ ಜಾರಿಗೊಳಿಸಿದ್ದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *