Ad Widget .

ಗೆಳೆಯನ‌ ಶವ ಊರಿಗೆ ಕೊಂಡೊಯ್ಯುತ್ತಿದ್ದವರೂ ಜವರಾಯನ ಬಳಿಗೆ| ಭೀಕರ ಅಪಘಾತದಲ್ಲಿ ಮೂವರು ಮಿತ್ರರು ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಿತ್ರರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ನಡೆದಿದೆ.

Ad Widget . Ad Widget .

ಅಪಘಾತದಲ್ಲಿ ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವಿಗೀಡಾದವರು ಹಾಗೂ ಗಾಯಾಳುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

Ad Widget . Ad Widget .

ಇವರ ಸ್ನೇಹಿತ ಬಸಯ್ಯ ಎಂಬಾತ ನಿನ್ನೆ ಬೆಂಗಳೂರಿನ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ. ಆತನ ಶವವನ್ನು ತೆಗೆದುಕೊಂಡು ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟು ಯಾದಗಿರಿ ಜಿಲ್ಲೆಯ ವಡಗೇರಾ ಎಂಬಲ್ಲಿಗೆ ಹೊರಟಿದ್ದರು.

ಇವರು ಬೆಂಗಳೂರಿನಿಂದ ಮೂರು ಕಾರು ಹಾಗೂ ಒಂದು ಆಂಬ್ಯುಲೆನ್ಸ್​ನಲ್ಲಿ ಹೊರಟಿದ್ದು, ಆ ಪೈಕಿ ಒಂದು ಕಾರು ಪಂಕ್ಚರ್​ ಆಗಿ ಹಿಂದೆ ಉಳಿದಿತ್ತು. ನಂತರ ಇವರು ಹೊರಟಿದ್ದು ಮಾರ್ಗಮಧ್ಯೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರು ಮತ್ತು ಇವರಿದ್ದ ಕಾರು ಮುಖಾಮುಖಿ ಡಿಕ್ಕಿ ಆಗಿದ್ದವು. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು ರಸ್ತೆಯಾಚೆಗೆ ಪಲ್ಟಿಯಾಗಿತ್ತು. ಗಾಯಾಳುಗಳನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *