Ad Widget .

ಎ.27; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ| ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ 200 ನವಜೋಡಿ

ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್(ರಿ) ಧರ್ಮಸ್ಥಳ ಇದರ ಆಶ್ರಯದಲ್ಲಿ ಏಪ್ರಿಲ್ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಈ ಬಾರಿ 200 ಜೋಡಿ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.

Ad Widget . Ad Widget .

ಏಪ್ರಿಲ್ 27ರ ಬುಧವಾರ ಸಂಜೆ 6.50ರ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯ ನೆರವೇರಲಿದೆ. ವಧುವರರಿಗೆ ಕ್ಷೇತ್ರದಿಂದ ಕರಿಮಣಿ, ತಾಳಿ ಮತ್ತು ವಧುವರರ ಉಡುಪು ಮತ್ತು ಹೂವಿನ ಮಾಲೆಯನ್ನು ವಿತರಿಸಲಿದ್ದಾರೆ. 50ನೇ ವರ್ಷದ ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವವರಿಗೆ ಕ್ಷೇತ್ರದಿಂದ ತಲಾ 5000 ಮೊತ್ತದ ವಿಶೇಷ ಉಡುಗೊರೆಯೂ ಲಭ್ಯವಾಗಲಿದೆ. ಈ ಉಡುಗೊರೆಯಲ್ಲಿ ಡೈನಿಂಗ್ ಸೆಟ್, ಡಿನ್ನರ್ ಸೆಟ್ ಸೇರಿದಂತೆ ಅಡುಗೆಯ ಪರಿಕರಗಳನ್ನು ಒದಗಿಸಲಿದ್ದಾರೆ.

Ad Widget . Ad Widget .

50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಗೋಲ್ಡನ್ ಸ್ಟಾರ್ ಖ್ಯಾತಿಯ ಕನ್ನಡ ಚಲನಚಿತ್ರ ನಟ ಗಣೇಶ್ ಭಾಗಿಯಾಗಲಿದ್ದಾರೆ. ಇವರ ಜೊತೆ ನಟ, ನಿರ್ದೇಶಕ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಭಾಗಿಯಾಗುವ ನವ ಜೋಡಿಗಳನ್ನು ಧರ್ಮಸ್ಥಳದ ವೈಶಾಲಿ ಅತಿಥಿಗೃಹ ಬಳಿಯಿಂದ ಅಮೃತವರ್ಷಿಣಿ ಸಭಾಭವನದವರೆಗೆ ವೈಭವದ ಮೆರೆವಣಿಗೆ ನಡೆಯಲಿದೆ. ಈ ಕಾರ್ಯಕ್ರಮ ಸಂಜೆ 5ರಿಂದ ಆರಂಭವಾಗಲಿದೆ. ಆರಂಭದಲ್ಲಿ ಬಡವರ್ಗದವರಿಗಾಗಿ ಅನ್ನುವ ಯೋಚನೆ ಇತ್ತಾದರೂ ಕ್ರಮೇಣ ಸರಳ ಮದುವೆಯಾಗಲು ಬಯಸುವವರೂ ಕೂಡ ಧರ್ಮಸ್ಥಳದ ಸಾಮೂಹಿಕ ವಿವಾಹದತ್ತ ಆಕರ್ಷಿತರಾಗಿದ್ದಾರೆ. ಈ ಬಾರಿಯೂ ಕೂಡ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಇಂಜಿನಿಯರ್ಸ್, ಪ್ರೋಫೆಸರ್, ವಿಶೇಷ ಚೇತನರು, ಮಧ್ಯಮ ವರ್ಗ, ಬಡವರ್ಗದವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

Leave a Comment

Your email address will not be published. Required fields are marked *