ಸಮಗ್ರ ನ್ಯೂಸ್: ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿದ್ದು 5-12 ವರ್ಷ ವಯೋಮಿತಿಯ ಮಕ್ಕಳಿಗೆ ಕೊರ್ಬೊವ್ಯಾಕ್ಸ್ ನೀಡಬಹುದು ಎಂದು ಭಾರತೀಯ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸು ಮಾಡಿದೆ.
ದೇಶದಲ್ಲಿ ಸದ್ಯ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಸೋಂಕು ಹೆಚ್ಚಾಗಲು ಒಮಿಕ್ರಾನ್ ರೂಪಾಂತರಿಯ ಉಪ ತಳಿ ಬಿಎ.2.12 ಕಾರಣ ಎಂದು ಅಧ್ಯಯನದಲ್ಲಿ ಅಭಿಪ್ರಾಯಪಡಲಾಗಿದೆ.
ಈ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಕೊರೊನಾ ಮಾರ್ಗಸೂಚಿಯ ಜೊತೆಗೆ ಮಕ್ಕಳಿಗೆ ವ್ಯಾಕ್ಸಿನೇಷನ್ ಕೂಡಾ ಅಗತ್ಯ ಎಂದು ಹೇಳಲಾಗಿದೆ.