Ad Widget .

ಸುಳ್ಯ: ಡಿಕೆಶಿ V/s ಸಾಯಿಗಿರಿಧರ್ ಕೇಸ್| ಸುಳ್ಯ ನ್ಯಾಯಾಲಯದ ತೀರ್ಪಿಗೆ ಪುತ್ತೂರು ಕೋರ್ಟ್ ತಡೆ

ಸಮಗ್ರ ನ್ಯೂಸ್ : ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ಮೂಲಕ ಬೈದು ನಿಂದಿಸಿದ್ದ ಆರೋಪದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ನೀಡಿದ ತೀರ್ಪಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಡೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಾಯಿ ಗಿರಿಧರ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು. ಇದರ ವಿಚಾರಣೆ ಪೂರ್ಣಗೊಳಿಸಿದ ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ಎ. ರವರು ಏಪ್ರಿಲ್.18 ರಂದು ತೀರ್ಪು ಪ್ರಕಟಿಸಿದರು.

Ad Widget . Ad Widget . Ad Widget .

ತೀರ್ಪಿನಲ್ಲಿ ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು. 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿತ್ತು. ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶವನ್ನು ನೀಡಲಾಗಿತ್ತು.

ಸಾಯಿ ಗಿರಿಧರ್ ಸುಳ್ಯ ನ್ಯಾಯಾಲಯದ ಈ ತೀರ್ಪಿನ ವಿರುದ್ಧ ಆರೋಪಿ ಸಾಯಿ ಗಿರೀಧರ್ ಪುತ್ತೂರಿನ 5ನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆರೋಪಿ ಪರ ಪುತ್ತೂರಿನ ನ್ಯಾಯವಾದಿ ಬಿ. ನರಸಿಂಹ ಪ್ರಸಾದ್ ಸಮರ್ಥ ವಾದ ಮಂಡಿಸಿದ್ದರು. ಸುಪ್ರೀಂ ಕೋರ್ಟ್ ತೀರ್ಪು ಅನ್ವಯ ಅಧಿಕಾರಿ, ಯಾ ಜನಪ್ರತಿನಿಧಿಗಳ ಬಳಿ ಗ್ರಾಹಕರು ಪ್ರಶ್ನೆ ಮಾಡುವುದು ಅಪರಾಧವಲ್ಲ ಎಂಬ ಆಂಶವನ್ನು ನ್ಯಾಯಪೀಠದ ಗಮನಕ್ಕೆ ತಂದ ಅವರು ಸುಳ್ಯ ನ್ಯಾಯಾಲಯದ ತೀರ್ಪಿಗೆ ತಡೆ ನೀಡುವಂತೆ ಕೋರಿದ್ದರು. ಆರೋಪಿ ಪರ ವಾದವನ್ನು ಮನ್ನಿಸಿದ ನ್ಯಾಯಪೀಠವು ಆರೋಪಿ ಸಾಯಿ ಗಿರಿಧರ್ ಗೆ ಸುಳ್ಯ ನ್ಯಾಯಾಲಯವು ವಿಧಿಸಿದ ಜೈಲು ಶಿಕ್ಷೆ ತೀರ್ಪಿಗೆ ತಡೆ ನೀಡಿ ಆದೇಶಿಸಿದೆ.‌

ಏನಿದು ಪ್ರಕರಣ ?
ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈ, 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್ ಸಚಿವ ಡಿ.ಕೆ. ಶಿವಕುಮಾರ್ ಗೆ ಫೋನಾಯಿಸಿ ತರಾಟೆಗೆತ್ತಿಕೊಂಡಿದ್ದರು.

ಈ ಸಂದರ್ಭ ಅವರು ಸುಳ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಹೇಳುವುದರ ಜತೆಗೆ ಸಚಿವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಡಿಕೆಶಿ ಪರವಾಗಿ ಮೆಸ್ಕಾಂ ಹಿರಿಯ ಅಧಿಕಾರಿಗಳು ಗಿರಿಧರ ರೈ ವಿರುದ್ಧ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋ ರಾತ್ರಿ ಗಿರಿಧರ್ ರೈ ಮನೆಗೆ ತೆರಳಿದ್ದರು. ಮನೆ ಬಾಗಿಲು ತೆರೆಯದಿದ್ದಾಗ ಮನೆ ಮಾಡಿನ ಹಂಚು ಸರಿಸಿ ಒಳ ಪ್ರವೇಶಿಸಿ ಅವರನ್ನು ಬಂಧಿಸಲಾಗಿತ್ತು.

Leave a Comment

Your email address will not be published. Required fields are marked *