ಸಮಗ್ರ ನ್ಯೂಸ್: ಇದೇ ಸೆಪ್ಟೆಂಬರ್ ತಿಂಗಳ 23, 24 ಮತ್ತು 25ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಆಯೋಜಿಸಲಾಗುವುದು ಎಂದು ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ ಹಾವೇರಿ ಜಿಲ್ಲಾಧಿಕಾರಿ ರಮಣದೀಪ್ ಉಪಸ್ಥಿತಿಯಲ್ಲಿ ನಡೆಸಲಾದ ಪೂರ್ವಭಾವಿ ಸಭೆಯ ಬಳಿಕ ಈ ಬಗ್ಗೆ ತೀರ್ಮಾನಿಸಲಾಗಿದೆ.