ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟ; ಸವಾರ ಸಾವು

ಸಮಗ್ರ ನ್ಯೂಸ್: ಪೆಟ್ರೋಲ್ – ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಜನರು ಬ್ಯಾಟರಿ ಚಾಲಿತ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿಗಳು ಸ್ಫೋಟಗೊಳ್ಳುತ್ತಿರುವುದು ವರದಿಯಾಗುತ್ತಿದ್ದು, ಅವುಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ.

Ad Widget ... ..

ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಲಗುವ ಕೋಣೆಯಲ್ಲಿ ಚಾರ್ಜ್ ಗೆ ಹಾಕಲಾಗಿದ್ದ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡಿದ್ದು ಶಿವಕುಮಾರ ಎಂಬಾತ ಮೃತಪಟ್ಟಿದ್ದು ಪತ್ನಿ ಮತ್ತು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಕೂಗಾಟದ ಸದ್ದು ಕೇಳಿಸಿಕೊಂಡ ಅಕ್ಕಪಕ್ಕದ ಮನೆಯವರು ಸಹಾಯಕ್ಕೆಂದು ಧಾವಿಸಿದ್ದಾರೆ.

Ad Widget

ಈ ವೇಳೆಗಾಗಲೇ ಶಿವಕುಮಾರ್ ಮೃತಪಟ್ಟಿದ್ದು, ಅವರ ಪತ್ನಿಯ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *