Ad Widget .

ಮಂಗಳೂರು: ಭಿಕ್ಷೆ ಬೇಡಿದ ಹಣವನ್ನು ಅನ್ನದಾನಕ್ಕಾಗಿ ನೀಡಿದ‌ ವೃದ್ಧೆ

ಸಮಗ್ರ ನ್ಯೂಸ್: ಕೇವಲ ತನ್ನ ಕುಟುಂಬ, ಸಂಸಾರ ಎಂದು ಹಲುಬುತ್ತಾ ಸ್ವಾರ್ಥ ಜೀವನ ನಡೆಸುವ ಈ ಕಾಲಘಟ್ಟದಲ್ಲಿ ಮಂಗಳೂರಿನ ಇಳಿವಯಸ್ಸಿನ ವೃದ್ಧೆ ತಾನು ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂಪಾಯಿ ಹಣವನ್ನು ದೇವಸ್ಥಾನದ ಅನ್ನದಾನಕ್ಕೆ ನೀಡಿ ಮಾದರಿಯಾಗಿದ್ದಾರೆ.

Ad Widget . Ad Widget .

80ರ ಹರೆಯದ ಇಳಿವಯಸ್ಸಿನ ಅಶ್ವತ್ಥಮ್ಮ ಸಮಾಜದಿಂದ ಬಂದ ಹಣವನ್ನು ಸಮಾಜಕ್ಕೇ ನೀಡಿ ಗಮನ ಸೆಳೆದಿದ್ದಾರೆ.

Ad Widget . Ad Widget .

ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ ಭಿಕ್ಷೆ ಬೇಡುತ್ತಿರುವ 80ರ ಹರೆಯ ಅಶ್ವತ್ಥಮ್ಮ ತಾನು ಭಿಕ್ಷೆ ಬೇಡಿ ಬಂದ ಹಣದಲ್ಲಿ ಒಂದು ಲಕ್ಷ ರೂಪಾಯಿಯನ್ನು ಪೊಳಲಿ ದೇವಸ್ಥಾನದ ಅನ್ನದಾನಕ್ಕೆ ನೀಡಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೋಡು ನಿವಾಸಿಯಾಗಿರುವ ಅಶ್ವತ್ಥಮ್ಮರ ಪತಿ 18 ವರ್ಷಗಳ‌ ಹಿಂದೆ ಮೃತರಾಗಿದ್ದಾರೆ. ಇವರ ಮಕ್ಕಳೂ ಇಹಲೋಕ ತ್ಯಜಿಸಿದ್ದಾರೆ. ಧಾರ್ಮಿಕ ಪ್ರಜ್ಞೆ ಹೊಂದಿರುವ ಅಶ್ವತ್ಥಮ್ಮ ಆ ಬಳಿಕ ದೇವಸ್ಥಾನದ ಮುಂದೆ ಭಿಕ್ಷಾಟನೆ ಮಾಡಲು ನಿರ್ಧಾರ ಮಾಡಿದ್ದಾರೆ. ಆದರೆ ಭಿಕ್ಷೆ ಬೇಡಿದ ಹಣವನ್ನು ಎಳ್ಳಷ್ಟೂ ಸ್ವಂತಕ್ಕೆ ಉಪಯೋಗಿಸದ ಅಶ್ವತ್ಥಮ್ಮ ಈವರೆಗೆ ಆರು ಲಕ್ಷ ರೂಪಾಯಿಗೂ ಅಧಿಕ ಹಣವನ್ನು ದೇವಸ್ಥಾನ, ಆಶ್ರಮಗಳಿಗೆ ದೇಣಿಗೆಯಾಗಿ ನೀಡಿದ್ದಾರೆ.

Leave a Comment

Your email address will not be published. Required fields are marked *