ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಯಮಸ್ವರೂಪಿ ಮರ; ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ.

Ad Widget ... ..

ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು.ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

Ad Widget

ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಆಗಿತ್ತು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *