ಸಮಗ್ರ ನ್ಯೂಸ್: ದೆಹಲಿಯಲ್ಲಿ ನಾಲ್ಕನೇ ಅಲೆ ಆರಂಭಗೊಂಡಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಏಪ್ರಿಲ್ 27ರಂದು ನಡೆಸಲಿದ್ದಾರೆ.
ಈ ವೀಡಿಯೋ ಕಾನ್ಫೆರೆನ್ಸ್ ಬಳಿಕ, ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟವಾಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಈ ಕುರಿತು ಮಾಹಿತಿ, ಕೊರೋನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಸೂಚನೆ ಕೂಡ ನೀಡಲಿದ್ದಾರೆ. ಈ ಬಳಿಕ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಕಳೆದ ಕೊರೋನಾ ಮೊದಲ, 2ನೇ ಹಾಗೂ ಮೂರನೇ ಅಲೆ ಆಧರಿಸಿ, ಈಗ ನಿಯಂತ್ರಣ ಕ್ರಮದ ಸ್ಪಷ್ಟ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ತಜ್ಞರು ಈಗಾಗಲೇ ವೈರಸ್ ಯಾವ ಮಾದರಿ ಇದೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತಜ್ಞರ ಸಲಹೆ ಆಧಾರದ ಮೇಲೆ ಪ್ರಧಾನಿಯವರೊಂದಿಗಿನ ವೀಡಿಯೋ ಸಂವಾದದ ಬಳಿಕ, ರಾಜ್ಯದಲ್ಲಿ ಸೋಂಕು ನಿಯಂತ್ರಣ ಕ್ರಮದ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.