ಮೈಸೂರು: ಓವರ್ ಟೇಕ್ ಮಾಡಿದ್ದಕ್ಕೆ ಬಸ್ ಚಾಲಕನ ಹಲ್ಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನವನ್ನು ಹಿಂದಿಕ್ಕಿದ ಎನ್ನುವ ಕಾರಣಕ್ಕೆ ನಾಲ್ವರು ದುಷ್ಕರ್ಮಿಗಳು ತಮಿಳುನಾಡಿನ ಬಸ್ ಜಖಂಗೊಳಿಸಿ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.

Ad Widget ... ..

ಶನಿವಾರ ರಾತ್ರಿ 10.30ರ ಸುಮಾರಿಗೆ ಮೈಸೂರಿನಿಂದ ತಮಿಳುನಾಡಿನ ಸೇಲಂಗೆ ತೆರಳುತ್ತಿದ್ದ ಬಸ್ ದ್ವಿಚಕ್ರ ವಾಹನವನ್ನು ಹಿಂದಿಕ್ಕಿತು ಎನ್ನುವ ಕಾರಣಕ್ಕೆ ನಗರದ ಕಾರಂಜಿ ಕೆರೆ ಬಳಿ ಬಸ್ ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನ ಮೇಲೆ ಏಕಾಏಕಿ ಮುಗಿಬಿದ್ದು, ಥಳಿಸಿದ್ದಾರೆ.

Ad Widget

ಕುಡಿದು ಮತ್ತಿನಲ್ಲಿದ್ದ ಅವರು, ಬಸ್ ಮುಂಭಾಗದ ಗಾಜನ್ನು ಕಲ್ಲಿನಿಂದ ಹೊಡೆದು ಪುಡಿಪುಡಿ ಮಾಡಿದ್ದಾರೆ.ಚಾಲಕನನ್ನು ಅವಾಚ್ಯ ಶದ್ದಗಳಿಂದ ನಿಂದಿಸಿದ್ದಾರೆ. ಈ ಎಲ್ಲ ದೃಶ್ಯವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ಫೋನ್​ನಲ್ಲಿ ಚಿತ್ರೀಕರಿಸುತ್ತಿದ್ದಂತೆ ಆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಜರ್‌ಬಾದ್ ಪೊಲೀಸರು ನಾಲ್ವರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *