ಸಾಲಗಾರರ ಹೆಸರು ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ!

ಸಮಗ್ರ ನ್ಯೂಸ್: ಸಾಲಬಾಧೆ ತಾಳಲಾರದೆ ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಶಿವಪುರದ ಕಲ್ಲುಕಟ್ಟೆ ಕೆರೆಯಲ್ಲಿ ಸೋಮವಾರ ನಡೆದಿದೆ.
ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದ ವಿಜಯ್ (27) ಮೃತ ದುರ್ದೈವಿ.

Ad Widget ... ..

ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ತಾನು ಕೊಡಬೇಕಿರುವ ಸಾಲದ ಮಾಹಿತಿ ಹಾಗೂ ನನ್ನ ಸಾವಿಗೆ ನಾನೇ ಕಾರಣ, ನಮ್ಮ ಜಮೀನು ಮಾರಿ ಸಾಲಗಾರರಿಗೆ ನೀಡಿ ಎಂದು ಬರೆದುಕೊಂಡಿದ್ದಾನೆ.

Ad Widget

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಶವವನ್ನು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜೊತೆಗೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Comment

Your email address will not be published. Required fields are marked *