ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಎ.27) ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ, ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ನೂತನ ಪತ್ರಕರ್ತರ ಭವನ ಶಂಕುಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಸಿಎಂ ಬೊಮ್ಮಾಯಿ ಮೂಡುಬಿದಿರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ – ಮಂಗಳೂರು ಉತ್ತರ ಉಪವಿಭಾಗದ ನಿರ್ದೇಶನದಂತೆ ಮೂಡುಬಿದಿರೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.