ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ದನಗಳನ್ನು ಪಿಕಪ್ ವಾಹನದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದಾಗ ರಕ್ಷಣೆ ಮಾಡಿದ ಘಟನೆ ತಿಳಿದು ಬಂದಿದೆ.
ಜಾನುವಾರುಗಳನ್ನು ಪಿಕಪ್ ವಾಹನವೊಂದರಲ್ಲಿ ಪುತ್ತೂರಿನ ಸಾಜಾ ಎಂಬಲ್ಲಿಂದ ಅಕ್ರಮವಾಗಿ ಸಾಗಿಸುತ್ತಿದ್ದದರ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ.