ಸಮಗ್ರ ನ್ಯೂಸ್: ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ವಿಕೃತಿ ಮೆರೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಯುವತಿ ಮನೆಯಿಂದ ಕೆಲಸಕ್ಕೆಂದು ಕಚೇರಿಗೆ ಹೋಗುತ್ತಿದ್ದಾಗ ಬೆಂಗಳೂರಿನ ಸುಂಕದ ಕಟ್ಟೆಯ ಬಳಿ ಯುವಕ, ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ.
ಆಸಿಡ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನ್ನನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪಾಗಲ್ ಪ್ರೇಮಿ ಯುವತಿ ಹಿಂದೆ ಬಿದ್ದಿದ್ದ. ಆದರೆ ಯುವತಿ ನಿರಾಕರಿಸಿದ್ದಳು. ಇದೇ ಕಾರಣಕ್ಕೆ ಸೇಡಿನಿಂದ ಯುವಕ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.