ಪೆಟ್ರೋಲ್, ಡೀಸೆಲ್‌ ತೆರಿಗೆ ಇಳಿಕೆ ವಿಚಾರ; ಸಿಎಂ ಬೊಮ್ಮಾಯಿ ನೀಡಿದ್ದಾರೆ ಗುಡ್ ನ್ಯೂಸ್

. Ad Widget . Ad Widget

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

. Ad Widget . . Ad Widget . Ad Widget

ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಎಂದು ಹೇಳಿದ್ದರು.

ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ನೋಡೋಣ. ನಾವು ನಮ್ಮ ಆರ್ಥಿಕತೆಯನ್ನು ಗಮನಿಸಬೇಕು. ಅದರ ಆಧಾರದ ಮೇಲೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತು ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *