ಸಮಗ್ರ ನ್ಯೂಸ್: ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್ ಸುದ್ದಿ ಸಿಕ್ಕಿದೆ. ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ವೇಳೆ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದೆಂಬ ಆತಂಕಕ್ಕೊಳಗಾಗಿದ್ದ ರೈತ ಸಮುದಾಯಕ್ಕೆ ಈ ಸುದ್ದಿ ನೆಮ್ಮದಿ ತಂದಿದೆ.
ಈ ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿತ್ತು. ಈ ಹಿನ್ನಲೆಯಲ್ಲಿ ಉತ್ತಮ ಬೆಳೆ ಬೆಳೆದು ಒಳ್ಳೆಯ ಆದಾಯ ಗಳಿಸಬಹುದೆಂಬ ಲೆಕ್ಕಾಚಾರದಲ್ಲಿದ್ದ ರೈತ ಸಮುದಾಯ ರಸಗೊಬ್ಬರಗಳ ಬೆಲೆ ಕಾರಣಕ್ಕೆ ಆತಂಕಕ್ಕೊಳಗಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ರಸಗೊಬ್ಬರಗಳ ಮೇಲಿನ ಸಬ್ಸಿಡಿ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಮೂಲಕ ರೈತರ ಆತಂಕವನ್ನು ದೂರ ಮಾಡಿದೆ.