ಸಮಗ್ರ ನ್ಯೂಸ್: ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಬೇಡಿ ಎಂದು ಸರ್ಕಾರ ಬೈಕ್ ತಯಾರಿಕಾ ಕಂಪನಿಗಳಿಗೆ ಸೂಚಿಸಿದೆ. ಬೈಕ್‌ಗಳಿಗೆ ಬೆಂಕಿ ತಗುಲುತ್ತಿರುವ, ಕೆಲವರು ಸಾವನ್ನಪ್ಪಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಎಲೆಕ್ಟ್ರಿಕ್ ಬೈಕ್‌ಗಳಿಗೆ ಬೆಂಕಿ ತಗುಲಿದ ಪ್ರಕರಣಗಳ ಬಗ್ಗೆ ಪ್ರತ್ಯೇಕ ತನಿಖೆಯಾಗಬೇಕು. ಈ ತನಿಖೆ ಪೂರ್ಣಗೊಳ್ಳುವ ತನಕ ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ.
ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲೆಕ್ಟ್ರಿಕ್ ಬೈಕ್ ತಯಾರಿಕಾ ಕಂಪನಿಗಳ ಜೊತೆ ಸಭೆ ನಡೆಸಿದೆ. ಈ ಸಭೆಯಲ್ಲಿ ಸೂಚನೆ ಕೊಡಲಾಗಿದ್ದು, ಯಾವುದೇ ಬೈಕ್ ಬೆಂಕಿಗೆ ಆಹುತಿಯಾಗಿದ್ದರೆ ಆ ಬ್ಯಾಚ್‌ನ ಎಲ್ಲಾ ವಾಹನಗಳನ್ನು ವಾಪಸ್ ಪಡೆದು ಮರು ಪರಿಶೀಲನೆ ಮಾಡುವಂತೆ ಸಹ ಹೇಳಿದೆ.
ಸಭೆಯಲ್ಲಿ ಎಲೆಕ್ಟ್ರಿಕ್ ಬೈಕ್ ತಯಾರಿಕಾ ಕಂಪನಿಗಳಿಗೆ ಹೊಸ ಬೈಕ್ ಬಿಡುಗಡೆ ಮಾಡದಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ. ಈಗ ಬೆಂಕಿ ಹೊತ್ತಿಕೊಂಡಿರುವ ಬೈಕ್‌ಗಳ ಬಗ್ಗೆ ತನಿಖೆ ನಡೆದು, ನಿಖರ ಕಾರಣ ಪತ್ತೆಯಾದ ಬಳಿಕ ಹೊಸ ಬೈಕ್‌ಗಳು ಬಿಡುಗಡೆಗೊಳ್ಳಲಿವೆ.