ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದಲ್ಲಿ ಲಕ್ನೋ ಮೂಲದ ಕಾರ್ಮಿಕ ಸಭಾಭವನದ ಫಿನಿಶಿಂಗ್ ಕಾಮಗಾರಿ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ವಿಟ್ಲ ಶೋಕಮಾತೆ ಇಗರ್ಜಿಯ ಸಂಬಂಧಪಟ್ಟ ಸಭಾಭವನದ ಫಿನಿಶಿಂಗ್ ಕೆಲಸ ಮಾಡುತ್ತಿದ್ದ ಲಕ್ನೋದ ಪಿಪ್ರಾ ಗೂಮ್ ಮೂಲದ ಕಾರ್ಮಿಕ ಜಯ ಪ್ರಕಾಶ್(25), ನಿನ್ನೆ ಸಂಜೆ ಮೃತಪಟ್ಟಿದ್ದಾನೆ . ಚಿಕಿತ್ಸೆಗೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಿಸದೇ ಜಯಪ್ರಕಾಶ್ ಅಸುನೀಗಿದ್ದಾರೆ.