ಸಮಗ್ರ ನ್ಯೂಸ್: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟುನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ
ಇವರು ಎ.28 ರಂದು ಸಂಜೆ ವೇಳೆ ಮನೆಯ ಅಂಗಳದಲ್ಲಿದ್ದ ತೆಂಗಿನ ಮರದಿಂದ ಕಾಯಿ ಕೊಯ್ಯಲೆಂದು ಮರ ಏರಿದ್ದವರು, ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.