ಸಮಗ್ರ ನ್ಯೂಸ್: ಅವಧಿ ಮುಕ್ತಾಯವಾದ ಒಂದು ಗ್ರಾಮ ಪಂಚಾಯಿತಿ ಹಾಗೂ ಕಳೆದ ಸಾರ್ವತ್ರಿಕ ಚುನಾವಣೆ ವೇಳೆ ನಾಮಪತ್ರ ಸಲ್ಲಿಕೆಯಾಗದ ಕಾರಣಕ್ಕೆ ಚುನಾವಣೆ ನಡೆಯದ 2 ಗ್ರಾಮ ಪಂಚಾಯಿತಿಗಳು ಸೇರಿದಂತೆ ವಿವಿಧ ಕಾರಣಗಳಿಗೆ ತೆರವಾಗಿದ್ದ 201 ಗ್ರಾ.ಪಂ. ಸದಸ್ಯ ಸ್ಥಾನಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಮೇ 5- ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ ಪ್ರಕಟ.
ಮೇ 10- ನಾಮಪತ್ರ ಸಲ್ಲಿಕೆಗೆ ಕೊನೆ ದಿನ.
ಮೇ 11-ನಾಮಪತ್ರಗಳ ಪರಿಶೀಲನೆ.
ಮೇ 13-ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ.
ಮೇ 20- ಮತದಾನ (ಬೆಳಿಗ್ಗೆ 7ರಿಂದ ಸಂಜೆ 5).
ಮೇ 22- ಮತ ಎಣಿಕೆ-ಫಲಿತಾಂಶ.