ಭಾರತ ಹಾಕಿ ತಂಡದ ಮಾಜಿ ನಾಯಕಿ ಎಲ್ವೆರಾ ಬ್ರಿಟ್ಟೋ ವಿಧಿವಶ

Ad Widget ... ..

ಸಮಗ್ರ ನ್ಯೂಸ್: ಭಾರತ ಮಹಿಳಾ ಹಾಕಿ ತಂಡದ ಮಾಜಿ ನಾಯಕಿ ಎಲ್ವೆರಾ ಬ್ರಿಟ್ಟೋ ವಯೋಸಹಜ ಖಾಯಿಲೆಗಳಿಂದಾಗಿ ಮಂಗಳವಾರ(ಎ.26) ಬೆಳಿಗ್ಗೆ ನಿಧನರಾಗಿದ್ದಾರೆ.

Ad Widget

81 ವರ್ಷದ ಎಲ್ವೆರಾ, 60ರ ದಶಕದ ಭಾರತ ಹಾಕಿ ವಲಯದಲ್ಲಿ ಬ್ರಿಟ್ಟೊ ಸಹೋದರಿಯರೆಂದೇ (ರೀತಾ ಮತ್ತು ಮೇ) ಪ್ರಸಿದ್ಧಿಯಾಗಿದ್ದ ಮೂವರು ಸಹೋದರಿಯರಲ್ಲಿ ಹಿರಿಯವರು. ಈ ಮೂವರು 1960-67ರವರೆಗ ದೇಶಿ ಟೂರ್ನಿಗಳಲ್ಲಿ ತಮ್ಮದೇ ಪ್ರಾಬಲ್ಯ ಸಾಧಿಸಿ ಕರ್ನಾಟಕ ತಂಡಕ್ಕೆ 7 ರಾಷ್ಟ್ರೀಯ ಚಾಂಪಿಯನ್​ಶಿಪ್ ತಂದುಕೊಟ್ಟಿದ್ದರು.

ಎಲ್ವಿರಾ ಭಾರತ ತಂಡವನ್ನು ಪ್ರತಿನಿಧಿಸಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದಾರೆ. 1965ರಲ್ಲಿ ಇವರಿಗೆ ಪದ್ಮ ಪ್ರಶಸ್ತಿ ದೊರೆತಿದ್ದು, ಈ ಪ್ರಶಸ್ತಿ ಪಡೆದ 2ನೇ ಮಹಿಳಾ ಹಾಕಿ ಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದರು.

Leave a Comment

Your email address will not be published. Required fields are marked *