ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆದಿದೆ ಎನ್ನಲಾದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಆಕೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆ ಪರಾರಿಯಾಗಿದ್ದಳು. ದಿವ್ಯಾ ಅವರಿಗಾಗಿ ಸಿಐಡಿ ತಂಡ ಎಲ್ಲಾ ಕಡೆ ಹುಡುಕಾಟ ನಡೆಸುತ್ತಿತ್ತು. ಸಾಕಷ್ಟು ದಿನಗಳವರೆಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿಯಾಗಿತ್ತು. ಆರೋಪಿಗಳಾದ ದಿವ್ಯಾ ಹಾಗರಗಿ, ಮಂಜುನಾಥ್, ಕಾಶೀನಾಥ್, ರವೀಂದ್ರ, ಶಾಂತಿಬಾಯಿ, ಅರ್ಚನಾ ಅವರನ್ನು ಬಂಧಿಸುವಂತೆ ಕಲಬುರಗಿಯ ಮೂರನೇ ಜೆಎಂಎಫ್ಸಿ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ.