ಸಮಗ್ರ ನ್ಯೂಸ್: ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿ ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಮಾಡಲಾಗಿದೆ.
ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಯಾರೇ ಇರಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 54289 ಮಂದಿ ಅರ್ಭಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಇದ್ದ ಆಪಾದಿತರನ್ನು ಬಿಟ್ಟು , ಉಳಿದವರಿಗೆ ಮರುಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.