ಸಚಿವ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ
ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ ನೀಡಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್, ಈಶ್ವರಪ್ಪ ರಾಜೀನಾಮೆಗೆ ಸೂಚನೆ ನೀಡಿದೆ. ಹೀಗಾಗಿ, ನಾಳೆ ಸಂಜೆಯೊಳಗೆ ಈಶ್ವರಪ್ಪ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಸಂಬಂಧ ಸಚಿವ ಈಶ್ವರಪ್ಪ ಈಗಾಗಲೇ ಸಿಎಂ ಜೊತೆಗೆ ಚರ್ಚೆ ನಡೆಸಿದ್ದಾರೆ. ಈಶ್ವರಪ್ಪ ಬೆಳಗ್ಗೆಯೇ ಮೈಸೂರಿನಿಂದ ತವರು ಜಿಲ್ಲೆ ಶಿವಮೊಗ್ಗಕ್ಕೆ ತೆರಳುತ್ತಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಸಚಿವ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ Read More »