April 2022

ಹಿಜಾಬ್, ಹಲಾಲ್ ಬಳಿಕ ಮಸೀದಿ ಧ್ವನಿವರ್ಧಕ ಕಿರಿಕ್

ಸಮಗ್ರ ನ್ಯೂಸ್: ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ […]

ಹಿಜಾಬ್, ಹಲಾಲ್ ಬಳಿಕ ಮಸೀದಿ ಧ್ವನಿವರ್ಧಕ ಕಿರಿಕ್ Read More »

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ|

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಘೋಷಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆಗೈದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ| Read More »

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು Read More »

ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್

ಸಮಗ್ರ ನ್ಯೂಸ್: ಹಲಾಲ್‌ ಬಾಯ್ಕಾಟ್‌ ಅಭಿಯಾನ ಬೆನ್ನೆಲ್ಲೇ ಪ್ರಾಣಿಗಳ ವಧೆ ಸಂದರ್ಭದಲ್ಲಿ ‘ಸ್ಟನ್ನಿಂಗ್‌’ (ಪ್ರಜ್ಞೆ ತಪ್ಪಿಸುವ) ವಿಧಾನ ಪಾಲಿಸಬೇಕು ಎಂಬ ಪಶುಪಾಲನಾ ಇಲಾಖೆ ಆದೇಶ ಪ್ರತಿಯೊಂದು ವೈರಲ್‌ ಆಗಿತ್ತು. ಆದರೆ, ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಇಲಾಖೆ ಅದೇಶದಿಂದ ಹಿಂದೆ ಸರಿದಿದ್ದು, ಸ್ಟನ್ನಿಂಗ್‌ ಕಡ್ಡಾಯ ನಿಯಮ ಆದೇಶ ಜಾರಿಗೊಳಿಸಿಲ್ಲ ಎಂದು ಸಚಿವ ಪ್ರಭು ಚವ್ಹಾಣ್‌ ಸ್ಟಷ್ಟನೆ ನೀಡಿದ್ದಾರೆ. ‘ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವಾಗ ಪ್ರಾಣಿಗಳಿಗೆ ಹಿಂಸೆ ನೀಡಬಾರದು. ಕಡ್ಡಾಯವಾಗಿ ಸ್ಟನ್ನಿಂಗ್‌ ಬಳಸಬೇಕು. ಆದರೆ, ಬೆಂಗಳೂರು ಪ್ರಾಣಿವಧಾಗಾರಗಳಲ್ಲಿ ಈ

ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್ Read More »

‘ಹಲಾಲ್, ಜಟ್ಕಾ ಹೆಸರಲ್ಲಿ ಸಮಾಜ ಒಡೆಯಲಾಗುತ್ತಿದೆ – ಸಚಿವ ಈಶ್ವರಪ್ಪ

ಸಮಗ್ರ ನ್ಯೂಸ್: ಹಲಾಲ್‌ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್‌ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು

‘ಹಲಾಲ್, ಜಟ್ಕಾ ಹೆಸರಲ್ಲಿ ಸಮಾಜ ಒಡೆಯಲಾಗುತ್ತಿದೆ – ಸಚಿವ ಈಶ್ವರಪ್ಪ Read More »

ಪಾಕಿಸ್ತಾನ ಸಂಸತ್ ದಿಢೀರ್ ವಿಸರ್ಜನೆ| ಮೂರು ತಿಂಗಳಲ್ಲಿ ಮರು ಚುನಾವಣೆಗೆ ಸೂಚನೆ

ಸಮಗ್ರ ನ್ಯೂಸ್: ಪಾಕಿಸ್ತಾನ ಸಂಸತ್ ಅನ್ನು ಪಾಕಿಸ್ತಾನ ಅಧ್ಯಕ್ಷರು ವಿಸರ್ಜಿಸಿದ್ದು ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದು, ಪ್ರಧಾನಿ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ. 90 ದಿನಗಳಲ್ಲಿ ಚುನಾವಣೆ ನಡೆಸಿ ಸರ್ಕಾರ ರಚನೆಗೆ ಸೂಚನೆ ನೀಡಿದ್ದಾರೆ. ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ವಿಪಕ್ಷ

ಪಾಕಿಸ್ತಾನ ಸಂಸತ್ ದಿಢೀರ್ ವಿಸರ್ಜನೆ| ಮೂರು ತಿಂಗಳಲ್ಲಿ ಮರು ಚುನಾವಣೆಗೆ ಸೂಚನೆ Read More »

ಕುಕ್ಕೆ ಸುಬ್ರಹ್ಮಣ್ಯ: ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ನಿವೃತ್ತ ಎಎಸ್ಐ ಸಾವು

ಸಮಗ್ರ ನ್ಯೂಸ್: ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ನಿವೃತ್ತ ಎಎಸ್ಐ ಎ. ಪೆರ್ಗಡೆ ಗೌಡ ಎಂಬವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿಯಲ್ಲಿ ನಡೆದಿದೆ. ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಮಾರು ದೂರ ಅವರನ್ನು ಎಳೆದುಕೊಂಡು ಹೋಗಿದ್ದು, ತಲೆಗೆ ಗಾಯವಾಗಿದ್ದು ದೇಹದ ಹಲವು ಭಾಗಗಳಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಸಾಗಿಸಲಾಯಿತಾದರೂ‌ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ: ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ನಿವೃತ್ತ ಎಎಸ್ಐ ಸಾವು Read More »

ಸುಳ್ಯ: ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್

ಸಮಗ್ರ ನ್ಯೂಸ್: ಹಿಜಾಬ್ ವಿವಾದದ ಬಳಿಕ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರಸ್ಥರು ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಮಾಡಿರುವ ಹಿನ್ನಲೆಯಲ್ಲಿ ಇದೀಗ ಬಹುತೇಕ ಜಾತ್ರೋತ್ಸವ ಸಂತೆ ಮಾರುಕಟ್ಟೆಯಲ್ಲಿ ಮುಸಲ್ಮಾನರಿಗೆ ವ್ಯಾಪಾರ ನಿರ್ಬಂಧಿಸಲಾಗುತ್ತಿದೆ. ಇದೀಗ ಈ ವ್ಯಾಪಾರ ನಿಷೇಧ ಸುಳ್ಯಕ್ಕೂ ಕಾಲಿರಿಸಿದ್ದು, ಇಲ್ಲಿನ ಜಯನಗರದ ಜಾತ್ರೋತ್ಸವದಲ್ಲಿ ಮುಸ್ಲಿಂಮರಿಗೆ ವ್ಯಾಪಾರ ನಿಷೇಧಿಸಿರುವ ಕುರಿತಾದ ಬ್ಯಾನರ್ ಅಳವಡಿಸಲಾಗಿದೆ. ಜಯನಗರದ ಆದಿಮೊಗೇರ್ಕಳ ಕೊರಗಜ್ಜನ ಸನ್ನಿಧಾನದಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರು ವ್ಯಾಪಾರ ನಡೆಸಬಾರದು ಎಂಬ ಬ್ಯಾನರ್ ಅಳವಡಿಸಲಾಗಿದೆ.

ಸುಳ್ಯ: ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್ Read More »

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ|

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು , ಇಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ . ಭಾನುವಾರ ಅಂದರೆ ಏಪ್ರಿಲ್ 03 , 2022 ರಂದು ಪ್ರತಿ ಲೀಟರ್ ಪೆಟ್ರೋಲ್ , ಡೀಸೆಲ್ ಬೆಲೆ ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದೆ . ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕ್ರಮವಾಗಿ ಪ್ರತಿ ಲೀಟರ್ಗೆ 80 ಪೈಸೆ ಏರಿಕೆಯಾಗಿದ್ದು , ಪೆಟ್ರೋಲ್ ಲೀಟರ್ ಗೆ 103.41

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ| Read More »

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ!

ಸಮಗ್ರ ನ್ಯೂಸ್: ಹಳಿಗಳು ಮುರಿದು ಬಿದ್ದಿದ್ದರಿಂದ ಸಂಭವಿಸಲಿದ್ದ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲು ಉತ್ತರಪ್ರದೇಶದ ಎಟಾಹ್ ಜಿಲ್ಲೆಯ ಗ್ರಾಮದ ಮಹಿಳೆಯೊಬ್ಬರು ತನ್ನ ಕೆಂಪು ಸೀರೆಯನ್ನು ಹಾರಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 20 ಕಿಮೀ ದೂರದಲ್ಲಿರುವ ಕುಸ್ಬಾ ರೈಲು ನಿಲ್ದಾಣದ ಬಳಿ ಗುರುವಾರ ಈ ಘಟನೆ ನಡೆದಿದೆ. ತಮ್ಮ ಸರಿಯಾದ ಸಮಯದ ಸರಿಯಾದ ನಡೆಯಿಂದ ಹಲವಾರು ಅಮೂಲ್ಯ ಜೀವಗಳನ್ನು ಉಳಿಸಿದ್ದಾರೆ. ಇಟಾಹ್ ಜಿಲ್ಲೆಯ ಅವಘರ್ ಬ್ಲಾಕ್‌ನ ಗುಲೇರಿಯಾ ಗ್ರಾಮದ ಓಮಾವತಿ (65) ಹೊಲಗಳಿಗೆ ಹೋಗುತ್ತಿದ್ದಾಗ ರೈಲ್ವೆ ಹಳಿಯಲ್ಲಿ ದೊಡ್ಡ ಬಿರುಕು

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ! Read More »