April 2022

ಮಂಗಳೂರು: ಅಪ್ರಾಪ್ತೆ ಹುಡುಗಿಗೆ ಕರೆ ಮಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದ ಬಸ್ ನಿರ್ವಾಹಕ| ತಾಯಿಯಿಂದ ಹಿಗ್ಗಾಮುಗ್ಗಾ ಥಳಿತ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೆ ಕರೆ ಮಾಡಿ ಮಾತನಾಡಿದ ಬಸ್ ನಿರ್ವಾಹಕನೋರ್ವನಿಗೆ ಬಾಲಕಿಯ ತಾಯಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ 8ನೇ ತರಗತಿ ಓದುತ್ತಿರುವ ಬಾಲಕಿಯೋರ್ವಳು ಬಸ್‌ನಲ್ಲಿ ಸಂಚರಿಸುತ್ತಿದ್ದಾಗ ಮಾತನಾಡಿಸಿದ ಬಸ್ ನಿರ್ವಾಹಕ ಬಳಿಕ ಮೊಬೈಲ್ ನಂಬರ್‌ನ್ನು ಆಕೆಗೆ ನೀಡಿದ್ದಾನೆ. ಅಲ್ಲದೆ, ಬಾಲಕಿಯ ಮನೆಗೆ ಕರೆ ಮಾಡಿ ಬಾಲಕಿಯೊಂದಿಗೆ ಮಾತನಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದು ಕೇಳಿದ್ದಾನೆ. ಇದರಿಂದ ಕೆರಳಿದ ಬಾಲಕಿಯ ತಾಯಿ ನಿರ್ವಾಹಕನನ್ನು ಭೇಟಿಯಾಗಿ ಆತನಿಗೆ ಹಿಗ್ಗಾಮಗ್ಗ ಥಳಿಸಿದ್ದಾಳೆ. ಬಾಲಕಿ […]

ಮಂಗಳೂರು: ಅಪ್ರಾಪ್ತೆ ಹುಡುಗಿಗೆ ಕರೆ ಮಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದ ಬಸ್ ನಿರ್ವಾಹಕ| ತಾಯಿಯಿಂದ ಹಿಗ್ಗಾಮುಗ್ಗಾ ಥಳಿತ Read More »

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಅರೆಬೆತ್ತಲೆಗೊಳಿಸಿ ಹಲ್ಲೆ; ಬಿಜೆಪಿ ಮುಖಂಡ ಸಹಿತ 9 ಮಂದಿ‌ ಬಂಧನ

ಸಮಗ್ರ ನ್ಯೂಸ್: ಜಾಗದ ತಕರಾರಿನ ವಿಚಾರದಲ್ಲಿ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆ ಗೊಳಿಸಿ ಹಲ್ಲೆ ನಡೆಸಿದ ಬಿಜೆಪಿ ಮುಖಂಡ ಸೇರಿದಂತೆ 9 ಮಂದಿ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಎಂಬಲ್ಲಿ ಘಟನೆ ನಡೆದಿದೆ. ನೆರೆಹೊರೆಯ ಮನೆಯವರ ಜಾಗದ ತಕರಾರಿನ ಹಿನ್ನಲೆಯಲ್ಲಿ ತಂಡದಿಂದ ಮಹಿಳೆಯರ ಬಟ್ಟೆ ಹರಿದು ಅರೆ ನಗ್ನಗೊಳಿಸಿ ಹಲ್ಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣಾ ಪೊಲೀಸರು ಬಿಜೆಪಿ ಎಸ್‌ಟಿ ಮೋರ್ಚಾದ ಅಧ್ಯಕ್ಷ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಅರೆಬೆತ್ತಲೆಗೊಳಿಸಿ ಹಲ್ಲೆ; ಬಿಜೆಪಿ ಮುಖಂಡ ಸಹಿತ 9 ಮಂದಿ‌ ಬಂಧನ Read More »

ಮೋದಿ ಜಮ್ಮು ಪ್ರವಾಸದ ವೇಳೆ ದಾಳಿಗೆ ಸಂಚು : ಗುಪ್ತಚರ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ವಿವಿಧ ಯೋಜನೆಯನ್ನು ಉದ್ಘಾಟಿಸುವ ಪ್ರಯುಕ್ತ ಪ್ರವಾಸ ಕೈಗೊಳ್ಳುತ್ತಿದ್ದರು. ಈ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯೊಂದನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಮೋದಿ ಜಮ್ಮು ಪ್ರವಾಸದ ವೇಳೆ ದಾಳಿಗೆ ಸಂಚು : ಗುಪ್ತಚರ ಇಲಾಖೆಯಿಂದ ಮಾಹಿತಿ Read More »

ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ| ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಿಎಂಗಳ ಸಭೆ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಅಂಕಿಅಂಶಗಳ

ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ| ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಿಎಂಗಳ ಸಭೆ Read More »

ಹಾವೇರಿಯಲ್ಲಿ ಜರುಗಲಿದೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಸಮಗ್ರ ನ್ಯೂಸ್: ಇದೇ ಸೆಪ್ಟೆಂಬರ್ ತಿಂಗಳ 23, 24 ಮತ್ತು 25ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಆಯೋಜಿಸಲಾಗುವುದು ಎಂದು ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಮಹೇಶ್ ಜೋಶಿ,

ಹಾವೇರಿಯಲ್ಲಿ ಜರುಗಲಿದೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ Read More »

ಮಂಗಳೂರು: ಭಿಕ್ಷೆ ಬೇಡಿದ ಹಣವನ್ನು ಅನ್ನದಾನಕ್ಕಾಗಿ ನೀಡಿದ‌ ವೃದ್ಧೆ

ಸಮಗ್ರ ನ್ಯೂಸ್: ಕೇವಲ ತನ್ನ ಕುಟುಂಬ, ಸಂಸಾರ ಎಂದು ಹಲುಬುತ್ತಾ ಸ್ವಾರ್ಥ ಜೀವನ ನಡೆಸುವ ಈ ಕಾಲಘಟ್ಟದಲ್ಲಿ ಮಂಗಳೂರಿನ ಇಳಿವಯಸ್ಸಿನ ವೃದ್ಧೆ ತಾನು ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂಪಾಯಿ ಹಣವನ್ನು ದೇವಸ್ಥಾನದ ಅನ್ನದಾನಕ್ಕೆ ನೀಡಿ ಮಾದರಿಯಾಗಿದ್ದಾರೆ. 80ರ ಹರೆಯದ ಇಳಿವಯಸ್ಸಿನ ಅಶ್ವತ್ಥಮ್ಮ ಸಮಾಜದಿಂದ ಬಂದ ಹಣವನ್ನು ಸಮಾಜಕ್ಕೇ ನೀಡಿ ಗಮನ ಸೆಳೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ ಭಿಕ್ಷೆ ಬೇಡುತ್ತಿರುವ 80ರ ಹರೆಯ ಅಶ್ವತ್ಥಮ್ಮ ತಾನು ಭಿಕ್ಷೆ

ಮಂಗಳೂರು: ಭಿಕ್ಷೆ ಬೇಡಿದ ಹಣವನ್ನು ಅನ್ನದಾನಕ್ಕಾಗಿ ನೀಡಿದ‌ ವೃದ್ಧೆ Read More »

ವಾಲ್ಮೀಕಿ ಆಶ್ರಮ‌ ಶಾಲೆ ಬಾಳಿಲದಲ್ಲಿ ಪ್ರವೇಶಾತಿ ಆರಂಭ

ಸಮಗ್ರ ನ್ಯೂಸ್: 2022-23ನೇ ಸಾಲಿಗೆ 1ನೇ ತರಗತಿಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಆಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಆಶ್ರಮ ಶಾಲೆ, ಬಾಳಿಲ ಇಲ್ಲಿ ಪ್ರವೇಶಾವಕಾಶ ಆರಂಭಗೊಂಡಿದೆ. ಪರಿಶಿಷ್ಟ ಪಂಗಡದವರಿಗೆ (ST) ಮೊದಲ ಆದ್ಯತೆಯಿದ್ದು, ಪರಿಶಿಷ್ಟ ಜಾತಿ ಮತ್ತು ಇತರ ವರ್ಗದವರಿಗೆ ಅವಕಾಶವಿರುತ್ತದೆ. ಆಯ್ಕೆ ಮತ್ತು ದಾಖಲಾತಿ ಪ್ರಕ್ರಿಯೆ ಹೀಗಿದೆ: 1, 2, 3, 4 ಮತ್ತು 5ನೇ ತರಗತಿಯವರೆಗೆ ದಾಖಲಾತಿಗೆ ಅವಕಾಶ. ಜನನ ಪ್ರಮಾಣ ಪತ್ರ,

ವಾಲ್ಮೀಕಿ ಆಶ್ರಮ‌ ಶಾಲೆ ಬಾಳಿಲದಲ್ಲಿ ಪ್ರವೇಶಾತಿ ಆರಂಭ Read More »

ಗುಡ್ ನ್ಯೂಸ್: ಎಸ್ಸಿ,ಎಸ್ಟಿ ಸಮುದಾಯಕ್ಕೆ 75 ಯುನಿಟ್ ಪ್ರೀ ವಿದ್ಯುತ್- ಸಿಎಂ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದಾರೆ. ಅಮ್ ಆದ್ಮಿಯ ಮುಖಂಡ ಮತ್ತು ದೆಹಲಿಯ ಸಿಎಂ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಮಾತನಾಡುತ್ತಾ ತಮ್ಮ ರಾಜ್ಯದಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಬಗ್ಗೆ ತಿಳಿಸಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಎಸಿ ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡುವ ಯೋಜನೆಯಿದೆ ಎಂದು ಘೋಷಿದ್ದಾರೆ. ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ

ಗುಡ್ ನ್ಯೂಸ್: ಎಸ್ಸಿ,ಎಸ್ಟಿ ಸಮುದಾಯಕ್ಕೆ 75 ಯುನಿಟ್ ಪ್ರೀ ವಿದ್ಯುತ್- ಸಿಎಂ Read More »

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟ; ಸವಾರ ಸಾವು

ಸಮಗ್ರ ನ್ಯೂಸ್: ಪೆಟ್ರೋಲ್ – ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಜನರು ಬ್ಯಾಟರಿ ಚಾಲಿತ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿಗಳು ಸ್ಫೋಟಗೊಳ್ಳುತ್ತಿರುವುದು ವರದಿಯಾಗುತ್ತಿದ್ದು, ಅವುಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಲಗುವ ಕೋಣೆಯಲ್ಲಿ ಚಾರ್ಜ್ ಗೆ ಹಾಕಲಾಗಿದ್ದ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡಿದ್ದು ಶಿವಕುಮಾರ ಎಂಬಾತ ಮೃತಪಟ್ಟಿದ್ದು ಪತ್ನಿ ಮತ್ತು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಕೂಗಾಟದ ಸದ್ದು ಕೇಳಿಸಿಕೊಂಡ ಅಕ್ಕಪಕ್ಕದ ಮನೆಯವರು ಸಹಾಯಕ್ಕೆಂದು ಧಾವಿಸಿದ್ದಾರೆ. ಈ

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟ; ಸವಾರ ಸಾವು Read More »

ಕರ್ನಾಟಕದಲ್ಲಿ ಭೂಮಾಲೀಕರು ಇನ್ನು ‘ಸ್ವಾವಲಂಬಿ’

ಸಮಗ್ರ ನ್ಯೂಸ್: ಭ್ರಷ್ಟಚಾರಕ್ಕೆ ಕಡಿವಾಣ ಹಾಕುವ ಸದುದ್ದೇಶದಿಂದ ಹಾಗೂ ಜನಸಾಮಾನ್ಯರು ಕಂದಾಯ ಇಲಾಖೆಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಮಹತ್ವಕಾಂಕ್ಷಿ ಆಪ್ ಒಂದನ್ನು ಬಳಕೆಗೆ ತಂದಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಬಳಕೆಗೆ ತಂದಿರುವ ಈ ಬಹುಪಯೋಗಿ ಆಪ್ ಗೆ ‘ಸ್ವಾವಲಂಬಿ ಆ್ಯಪ್’ ಎಂದು ಹೆಸರಿಡಲಾಗಿದೆ. ಈ ಆಪ್ ಮೂಲಕ ತಮ್ಮತಮ್ಮಜಮೀನನ್ನು ಸಮೀಕ್ಷೆ ಮಾಡಿ ನಕ್ಷೆ ಸಿದ್ಧಪಡಿಸಿಕೊಳ್ಳುವ ಅವಕಾಶವನ್ನು ಜಮೀನಿನ ಮಾಲೀಕರಿಗೆ ನೀಡಲಾಗಿದೆ. ಜನ ಸಾಮಾನ್ಯರು ತಮ್ಮ ಸ್ವಂತ ಜಮೀನಿನ ಸ್ಕೆಚ್, ಪೋಡಿ,

ಕರ್ನಾಟಕದಲ್ಲಿ ಭೂಮಾಲೀಕರು ಇನ್ನು ‘ಸ್ವಾವಲಂಬಿ’ Read More »