ಬಿಪಿಎಲ್ ಕಾರ್ಡ್‌ದಾರರಿಗೆ ಭರ್ಜರಿ ಆಫರ್|ವಾರ್ಷಿಕ ಮೂರು ಎಲ್‌ಪಿಜಿ ಸಿಲಿಂಡರ್ ಉಚಿತ- ಗೋವಾ ಬಿಜೆಪಿ

ಸಮಗ್ರ ನ್ಯೂಸ್: ಪ್ರತಿ ಮನೆಗೆ ವರ್ಷಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಚುನಾವಣೆಯ ಸಂದರ್ಭದಲ್ಲಿ ಗೋವಾ ಬಿಜೆಪಿ ಘೋಷಿಸಿತ್ತು. ಇದೀಗ ಭರವಸೆ ಅನುಷ್ಟಾನಕ್ಕೆ ತಂದಿರುವ ಗೋವಾ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಸಿಲಿಂಡರ್ ಕೊಡುಗೆ ಲಭ್ಯವಾಗಲಿದೆ ಎಂದಿದೆ.

Ad Widget ... ..

ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಗೋವಿಂದ ಗಾವಡೆ ಸುದ್ಧಿಗಾರರೊಂದಿಗೆ ಮಾತನಾಡಿ, ಪಡಿತರ ಚೀಟಿದಾರರನ್ನು ಹೊರತುಪಡಿಸಿ ವಾರ್ಷಿಕ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ವರ್ಷಕ್ಕೆ 3 ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಹೇಳಿದ್ದಾರೆ. 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸರ್ಕಾರಿ ಪ್ರಾಧಿಕಾರದಿಂದ ಆದಾಯ ಪ್ರಮಾಣಪತ್ರವನ್ನು ಪಡೆದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು. 3 ಸಿಲಿಂಡರ್ ಗಳ ಹಣವನ್ನು ಸಂಬಂಧಿತ ಕುಟುಂಬದ ಖಾತೆಗೆ ಜಮಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

Ad Widget

ಈ ಕೊಡುಗೆಯ ಜೊತೆಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪೆಟ್ರೋಲ್ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಹೆಚ್ಚಿಸುವುದಿಲ್ಲ ಎಂದೂ ಘೋಷಿಸಿಕೊಂಡಿದೆ.

Leave a Comment

Your email address will not be published. Required fields are marked *