ಸಮಗ್ರ ನ್ಯೂಸ್: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಇದೀಗ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದಾರೆ.
ಬಿಹಾರದಲ್ಲಿ ಹೊಸ ಪಕ್ಷ ಸ್ಥಾಪಿಸಿ ಇತರೆ ಪಕ್ಷಗಳಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ. ಈ ಕುರಿತು ಇಂದು ಬೆಳಗ್ಗೆ ಮಾಡಿರುವ ಟ್ವೀಟ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿತ್ತು. ಈ ಸಂಬಂಧ ಸೋನಿಯಾ, ರಾಹುಲ್ ಗಾಂಧಿ ಅವರೊಂದಿಗೆ ಕೂಡ ಮಾತುಕತೆ ನಡೆಸಿದ್ದರು. ಆದರೆ ಪ್ರಶಾಂತ್ ಅವರ ಷರತ್ತಿಗೆ ಕಾಂಗ್ರೆಸ್ ಒಪ್ಪದ ಕಾರಣ ಪಕ್ಷ ಸೇರ್ಪಡೆಯಿಂದ ದೂರ ಉಳಿದರು.