Ad Widget .

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ಬಸವ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.

Ad Widget . Ad Widget .

ಬಸವ ಜಯಂತಿ ದಿನವಾದ ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ.

Ad Widget . Ad Widget .

ಡಾ.ಶಿವಮೂರ್ತಿ ಮುರುಘ ಶರಣು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪ್ರಣೀತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟುಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಕನ್ನಡ ಚಲನಚಿತ್ರ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *