ಮಂಗಳೂರು: ನಾಗನ ಕಲ್ಲುಗಳನ್ನು ಬೇರೆಡೆ ಎಸೆದು ವಿಕೃತಿ

ಸಮಗ್ರ ನ್ಯೂಸ್: ನಾಗಬನದಲ್ಲಿದ್ದ 6 ನಾಗನ ಕಲ್ಲುಗಳನ್ನು ಬೇರೆ ಬೇರೆ ಜಾಗದಲ್ಲಿ ಎಸೆದು ವಿಕೃತಿ ಮೆರೆದ ಘಟನೆ ಕಟೀಲು ಸಮೀಪದ ಮಲ್ಲಿಗೆಯಂಗಡಿಯಲ್ಲಿ ರವಿವಾರ ನಡೆದಿದೆ.

Ad Widget ... ..

ಕಟೀಲು ಮಲ್ಲಿಗೆಯಂಗಡಿಯ ಪಡುಸಾಂತ್ಯ ಭಂಡಾರಿ ಮನೆತನದ ನಾಗಬನದಲ್ಲಿದ್ದ ನಾಗನ ಕಲ್ಲುಗಳನ್ನು ದುಷ್ಕರ್ಮಿಗಳು ಬೇರೆ ಜಾಗದಲ್ಲಿ ಎಸೆದಿದ್ದಾರೆ. ರವಿವಾರ ಬೆಳಗ್ಗೆ ಮನೆತನದ ವ್ಯಕ್ತಿಯಾಬ್ಬರು ಈ ಜಾಗದಲ್ಲಿ ತೆರಳುತ್ತಿದ್ದ ವೇಳೆ ನಾಗನ ಕಲ್ಲು ಆವರಣದಿಂದ ಹೊರಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲಿಸಿದಾಗ ನಾಗಬನದಲ್ಲಿ ಪ್ರತಿಷ್ಠೆ ಮಾಡಿದ ಜಾಗದಿಂದ 6 ನಾಗನ ಕಲ್ಲುಗಳನ್ನು ಎಸೆದು ಬೇರೆ ಬೇರೆ ಜಾಗದಲ್ಲಿ ಹಾಕಿರುವುದು ಗೊತ್ತಾಗಿದೆ.

Ad Widget

ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕ ಈಶ್ವರ್‌ ಕಟೀಲು ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *