ಸಮಗ್ರ ನ್ಯೂಸ್: ಟಿಪ್ಪರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಡೆದಿದೆ.

ಘಟನೆಯಲ್ಲಿ ಓರ್ವ ಸವಾರನ ದೇಹ ಸ್ಥಳದಲ್ಲೇ ಛಿದ್ರವಾಗಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಂಬ್ರ ಸಮೀಪದ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಎಂಬವರ ಪುತ್ರ ಸಿನಾನ್ ಮೃತಪಟ್ಟ ಯುವಕ. ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಆವರನ್ನು ಹೆಚ್ಚಿನ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.