ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳದೊಂದಿಗೆ ಶೇ.4.40ಕ್ಕೆ ಏರಿಕೆ ಮಾಡಿದೆ.
2020ರ ನಂತರ ಇದೇ ಮೊದಲ ಬಾರಿಗೆ ಆರ್‌ಬಿಐ ರೆಪೋ ದರ ಹೆಚ್ಚಳ ಮಾಡಿದ್ದು ಈ ಮೂಲಕ ಸಾಲದ ಮೇಲಿನ ಬಡ್ಡಿದರ ಹೆಚ್ಚಳವಾಗುವ ಸಾಧ್ಯತೆ ಬಹುತೇಕ ಅಧಿಕವಾಗಿದೆ.
ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ. ಜಾಗತಿಕ ಆರ್ಥಿಕ ಅಸ್ಥಿರತೆ ನಡುವೆಯೂ ಭಾರತೀಯ ಆರ್ಥಿಕತೆ ಸ್ಥಿರವಾಗಿದೆ ಎಂದು ಹೇಳಿದರೂ ಕೂಡಾ ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಗೊತ್ತಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.