“ಲವ್ ಜಿಹಾದ್” ಗೆ ಬಲಿಯಾದಳಾ ಬಾಲೆ| ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ವಿದ್ಯಾರ್ಥಿನಿ ಪ್ರಕರಣಕ್ಕೆ ಟ್ವಿಸ್ಟ್|

ಸಮಗ್ರ ನ್ಯೂಸ್: ಸುಳ್ಯ ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು, ಈ ಪ್ರಕರಣ ಈಗ ಲವ್ ಜಿಹಾದ್ ಎಂದು ಹೇಳಲಾಗುತ್ತಿದೆ. ಮುಸ್ಲಿಂ ವ್ಯಕ್ತಿಯ ಮನೆಯಲ್ಲಿದ್ದ ಬಾಡಿಗೆಗಿದ್ದ ಆಕೆ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Ad Widget ... ..

ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14)ಳ ಮೃತದೇಹ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವಿದ್ಯಾರ್ಥಿನಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ‌ ಈಕೆ ಇಂದು ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

Ad Widget

ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತ್ಮಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆ ಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೆ ಈ ವಿಚಾರ ಈಗ ವಿವಾದವಾಗಿ ಪರಿವರ್ತನೆಯಾಗಿದ್ದು, ಕನ್ಯಾನ ಗ್ರಾಮದ ತಲೆಕ್ಕಿಯ ಸಾಹುಲ ಹಮೀದ್ ಎಂಬಾತ ವಿದ್ಯಾರ್ಥಿನಿಯ ಜೊತೆಗೆ ಪ್ರೇಮದ ನಾಟಕವಾಡಿ ಮಾನಸಿಕ ಹಿಂಸೆ ನೀಡಿದ್ದಾನೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಈ ಬಗ್ಗೆ ತನಿಖೆ ನಡೆಸಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಹಿಂಪ ಬಜರಂಗದಳ ವಿಟ್ಲ ಪ್ರಖಂಡ ಒತ್ತಾಯಿಸಿ ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್‌ ಇ ನಾಗರಾಜ್ ಅವರಿಗೆ ಮನವಿ ಮಾಡಿದ್ದಾರೆ.

ಇದೀಗ ವಿದ್ಯಾರ್ಥಿನಿ ಲವ್ ಜಿಹಾದ್ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು, ಸಮಗ್ರ ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಬೇಕಿದೆ.

Leave a Comment

Your email address will not be published. Required fields are marked *