“ಎಲ್ಲರನ್ನೂ ಬಿಟ್ಟು ಬಾ; ಇಲ್ಲದಿದ್ದರೆ ಸಾಯಿ” | ಪ್ರೀತಿಯಿಂದಲೇ ಆತ್ಮಹತ್ಯೆಗೆ ಪ್ರೇರೇಪಿಸಿದನಾ ಆ ಮುಸ್ಲಿಂ ಯುವಕ?

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕನ್ಯಾನ ಎಂಬಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ ಯುವಕನೊಬ್ಬನ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget ... ..

‘ತಂದೆ, ತಾಯಿಯನ್ನು ಬಿಟ್ಟು ನನ್ನೊಂದಿಗೆ ಬಾ, ಇಲ್ಲವಾದರೆ ಸಾಯಿ..’ ಎಂದು ಪ್ರೀತಿಸಲು ಒತ್ತಾಯಿಸುತ್ತಿದ್ದ ಅನ್ಯ ಕೋಮಿನ ಯುವಕನ ಪ್ರಚೋದನೆಯೇ ಆತ್ಮಹತ್ಯೆಗೆ ಕಾರಣ ಎಂದು ತಂದೆ ವಿಟ್ಲ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

ಈ ನಡುವೆ ಸ್ಥಳೀಯ ಭಜರಂಗದಳ ಘಟಕವೂ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದು, ವಿಟ್ಲ ಸಿಐ ನಾಗರಾಜ್ ನೇತೃತ್ವದಲ್ಲಿ ತನಿಖೆ ಸಾಗಿದೆ.

ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸುಳ್ಯ ತಾಲೂಕಿನ ಪಂಜದ ನಿವಾಸಿಯ ಪುತ್ರಿ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಮನೆ ಮಂದಿ ಕೆಲಸಕ್ಕೆ ಹೋಗಿದ್ದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕನೊಬ್ಬ ಬರುತ್ತಿದ್ದ. ನನ್ನ ಮಗಳನ್ನು ಭೇಟಿಯಾಗಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಬಳಿಕ ತಂದೆ-ತಾಯಿಯನ್ನು ಬಿಟ್ಟು ನನ್ನೊಂದಿಗೆ ಬಾ ಎಂದು ಪೀಡಿಸುತ್ತಿದ್ದ. ಮಗಳಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆಗೆ ಒಳಗಾಗುವಂತೆ ಮಾಡಿದ್ದಾನೆ. ಹೀಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಾಲಕಿ ತಂದೆ ದೂರಿನಲ್ಲಿ ವಿವರಿಸಿದ್ದಾರೆ.

Leave a Comment

Your email address will not be published. Required fields are marked *