ಮತ್ತೆ ಉದ್ವಿಗ್ನಗೊಂಡ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಪುಂಡಾಟ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದ ಹೊರವಲಯದ ಮತ್ತೂರು ರಸ್ತೆಯ ಇಂದಿರಾನಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುವಕರ ಗುಂಪು ಕಾರೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Ad Widget ... ..

ಮತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕಾರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇಂದಿರಾನಗರದ ಅನ್ಯಕೋಮಿನ ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ. ರಸ್ತೆಯ ಹಂಪ್ ಬಳಿ ಕಾರ್ ನಿಧಾನವಾಗುತ್ತಿದ್ದಂತೆ ಕಲ್ಲುತೂರಾಟ ನಡೆಸಲಾಗಿದ್ದು, ನೂರಾರು ಜನರು ಸೇರಿಕೊಂಡು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

Ad Widget

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಮುಖಂಡರು, ಹಿಂದೂ ಸಂಘಟನೆಯ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ, ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *