ಸಮಗ್ರ ನ್ಯೂಸ್: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಹಲವು ದಿನಗಳಿಂದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯುವ ಸೂಚನೆ ಇತ್ತು. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಹೆಸರಿನಲ್ಲಿ ಚುನಾವಣಾ ಕಣಕ್ಕೆ ಇಳಿದ ಪ್ರಮೋದ್ ಮಧ್ವರಾಜ್ ಸೋತಿದ್ದರು. ಪ್ರಚಾರದ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಯೆಂದು ಗುರುತಿಸಿಕೊಂಡಿದ್ದರು.