ಸಮಗ್ರ ನ್ಯೂಸ್: ಪ್ರಮುಖ ಪ್ರವಾಸಿ ತಾಣವಾದ ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ವಾರದ ಒಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಎಂದು ತಿಳಿದು ಬಂದಿವೆ.
ಈಚೆಗಷ್ಟೇ ಉದ್ಘಾಟನೆಗೊಂಡಿರುವ ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು ಮತ್ತು ಅನುಭವಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರೂ ಅವಕಾಶ ನೀಡಿರಲಿಲ್ಲ. ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಸ್ವಯಂಸೇವಕರು ಕಟ್ಟೆಚ್ಚರ ವಹಿಸಿದ್ದರು. ಇಲ್ಲಿನ ಜೀವ ರಕ್ಷಕ ತಂಡ ಎಲ್ಲರ ಮೇಲೂ ನಿಗಾ ಇರಿಸಿ, ನೀರಿಗಿಳಿಯಲು ನಿಷೇಧ ಹೇರಿತ್ತು.
ವಿಡಿಯೋಗಾಗಿ ಈ ಲಿಂಕ್ ತೆರೆಯಿರಿ
https://youtube.com/shorts/9cuhJL6lglk?feature=share
ಕಡಲಬ್ಬರದ ಹಿನ್ನೆಲೆಯಲ್ಲಿ ವಾಟರ್ ಸ್ಪೋರ್ಟ್ಸ್ ಬಂದ್ ಸಮುದ್ರದ ಅಲೆಗಳ ಒತ್ತಡ ಬೆಳಗ್ಗಿನಿಂದಲೇ ಹೆಚ್ಚು ಕಂಡುಬಂದಿದ್ದು, ರವಿವಾರ ಮಧ್ಯಾಹ್ನದ ಬಳಿಕ ಗಾಳಿಯ ವೇಗಕ್ಕೆ ಅಲೆಗಳು ತೀವ್ರತೆ ಪಡೆದುಕೊಂಡಿದ್ದವು. ಹಾಗಾಗಿ ಮಲ್ಪೆ ಬೀಚ್‌ನಲ್ಲಿ ಅಪರಾಹ್ನ 4ರ ಬಳಿಕ ಯಾವುದೇ ವಾಟರ್ ಸ್ಪೋರ್ಟ್ಸ್ ನಡೆಸಲು ಆವಕಾಶ ನೀಡಲಿಲ್ಲ.
ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹ ಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿತ್ತು.