Ad Widget .

ಮಂಗಳೂರು: ಮೇ.14 ಮತ್ತು 15 ರಂದು ಮಂಗಳೂರು ವಿ.ವಿ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಂಗಳಗಂಗೋತ್ರಿಯ ಕ್ಯಾಂಪಸ್‌ನಲ್ಲಿ ಮೇ 14 ಮತ್ತು 15ರಂದು ಉದ್ಯೋಗ ಮೇಳ ಆಯೋಜಿಸಿವೆ.

Ad Widget . Ad Widget .

ಮ್ಯಾಜಿಕ್‌ ಬಸ್‌ನ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ವಲಯದ ಕ್ಲಸ್ಟರ್‌ ಮ್ಯಾನೇಜರ್‌ ಚಿರಂಜೀವಿ ಅಂಬರ್‌ನಾಥ್‌ ಮೇ 14ರಂದು ಬೆಳಿಗ್ಗೆ 10.30ಕ್ಕೆ ಉದ್ಯೋಗ ಮೇಳವನ್ನು ಉದ್ಘಾಟಿಸುವರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಕಿಶೋರ್‌ ಕುಮಾರ್‌ ಸಿ.ಕೆ., ಕುಲಸಚಿವ (ಪರೀಕ್ಷಾಂಗ) ಪ್ರೊ. ಪಿ.ಎಲ್‌. ಧರ್ಮ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎಸ್‌.ಜೆ. ಹೇಮಚಂದ್ರ, ಹಣಕಾಸು ಅಧಿಕಾರಿ ಪ್ರೊ. ಕೆ.ಎಸ್‌. ಜಯಪ್ಪ, ಯುಟಿಪಿಸಿ ಯೋಜನೆ ಆಧರಿತ ಸಲಹೆಗಾರ್ತಿ ಶಾರದಾ ಎಚ್‌.ಎಸ್‌. ಪಾಲ್ಗೊಳ್ಳುವರು.

Ad Widget . Ad Widget .

11ಸಾವಿರ ಹುದ್ದೆಗಳು: ಎರಡು ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಸುಮಾರು 40 ಕಂಪನಿಗಳು ಭಾಗವಹಿಸಲಿದ್ದು, ಸುಮಾರು 11,100 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಯುಇಐಜಿಬಿ ಮತ್ತು ಯುಟಿಪಿಸಿ ಮಂಗಳೂರು ವಿಶ್ವವಿದ್ಯಾಲಯದ ವಿವಿಧ ಘಟಕ, ಸಂಯೋಜಿತ, ಸ್ವಾಯತ್ತ ಕಾಲೇಜುಗಳಿಂದ ಮತ್ತು ಮಂಗಳೂರು ವಿ.ವಿ. ಕ್ಯಾಂಪಸ್‌ನ ವಿದ್ಯಾರ್ಥಿಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು, ಅದನ್ನು ಮ್ಯಾಜಿಕ್‌ ಬಸ್‌ ಎಂಬ ಸರ್ಕಾರೇತರ ಸಂಸ್ಥೆಗೆ ಹಸ್ತಾಂತರಿಸಲಾಗಿದೆ. ಸಂಸ್ಥೆ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರಿಗೆ ಟೋಕನ್‌ ಒದಗಿಸಿ ನೇಮಕಾತಿಗೆ ನೇರ ಸಂದರ್ಶನ ನಡೆಸಲಿದೆ. ಕನಿಷ್ಠ ವೇತನ ₹10 ಸಾವಿರ ಇರಲಿದೆ.

ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಲು ಸಹ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಬಯೊಡೇಟಾ, ಆಧಾರ್‌ ಕಾರ್ಡ್‌, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯ ಜೊತೆಗೆ ಗರಿಷ್ಠ ಅರ್ಹತೆಯ ಅಂಕಪಟ್ಟಿಯನ್ನು ತರಬೇಕು. ಅಂತಿಮ ವರ್ಷದ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವವರೂ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *